ಬೆಂಗಳೂರು,ಮಾ13(AZM):ಲೋಕಸಭಾ ಚುನಾವಣೆಯಲ್ಲಿ ಗೊಂದಲದಿಂದ ಕೂಡಿದ್ದ ಕಾಂಗ್ರೆಸ್ ಜೆಡಿಎಸ್ ಸೀಟು ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ.
ಎರಡೂ ಪಕ್ಷಗಳೂ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ವಿಚಾರ ಫೈನಲ್ ಮಾಡಿದ್ದು,ಉತ್ತರ ಕನ್ನಡ, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ.
ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿದ್ದ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಜೆಡಿಎಸ್ 8 ಕ್ಷೇತ್ರ ಹಾಗೂ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.