ಬೆಂಗಳೂರು,ಮಾ 19 (MSP):ಮೈತ್ರಿ ಮೂಲಕ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಕಾಂಗ್ರೆಸ್-ಜೆಡಿಎಸ್ ಚುನಾವಣೆ ರಣತಂತ್ರ , ಮೈತ್ರಿ ಅಭ್ಯರ್ಥಿಗಳ ಆಯ್ಕೆ, ಚುನಾವಣೆಯ ಉಸ್ತುವಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳ ಚರ್ಚೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಗರದ ಖಾಸಗಿ ಹೊಟೇಲ್ ನಲ್ಲಿ ಸಭೆ ಸೇರಿದ್ದಾರೆ.
ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ, ಹಾಗೂ ಕೆಲವೊಂದು ಕ್ಷೇತ್ರಗಳ ನಡುವೆ ಉಂಟಾಗಿರುವ ಮಿತ್ರಪಕ್ಷಗಳ ನಡುವೆ ಉಂಟಾಗಿರುವ ಅಸಮಾಧಾನ, ಹಾಗೂ ಮೈತ್ರಿ ಪಕ್ಷಗಳಿಗೆ ಪರಸ್ಪರ ಬೆಂಬಲ ನೀಡುವುದು, ಜೆಡಿಎಸ್ ನಾಯಕರ ಜೊತೆ ಚುನಾವಣಾ ಪ್ರಚಾರ ಕೈಗೊಳ್ಳುವ ವಿಷಯ ಸೇರಿದಂತೆ ಮೊದಲಾದವುಗಳ ಕುರಿತು ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ , ಕುಪೇಂದ್ರ ರೆಡ್ಡಿ ಭಾಗಿಯಾಗಿದ್ದಾರೆ.