ನವದೆಹಲಿ,ಮಾ 20(MSP): ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರನ್ನು ದೇಶದ ಮೊದಲ ಲೋಕಪಾಲರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಮಂಗಳವಾರ ಆದೇಶ ಹೊರಡಿಸಿದೆ.
ಇದರೊಂದಿಗೆ ೫೦ ವರ್ಷದ ಹೋರಾಟದ ಬಳಿಕ ಭ್ರಷ್ಟಾಚಾರ ನಿಗ್ರಹಕ್ಕಾಗಿ ಜನಲೋಕಪಾಲ ವ್ಯವಸ್ಥೆ ಜಾರಿಗೆ ಬರಲಿದೆ. ತಂಡದಲ್ಲಿ ಮೂವರು ನ್ಯಾಯಾಂಗೇತರ ಮತ್ತು ನಾಲ್ವರು ನ್ಯಾಯಾಂಗ ಸದಸ್ಯರು ಇರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಈ ನೇಮಕಾತಿ ನಡೆದಿದೆ.
ನ್ಯಾಯಾಂಗ ಕ್ಷೇತ್ರದ ಸದಸ್ಯರು: ನ್ಯಾಯಮೂರ್ತಿಗಳಾದ ದಿಲೀಪ್ ಬಿ ಬೋಸ್ಲೆ, ಪ್ರದೀಪ್ ಕುಮಾರ್ ಮೊಹಾಂತಿ, ಅಭಿಲಾಷ ಕುಮಾರಿ, ಅಜಯ್ ಕುಮಾರ್ ತ್ರಿಪಾಠಿ.
ನ್ಯಾಯಾಂಗೇತರ ಕ್ಷೇತ್ರದ ಸದಸ್ಯರು: ಸಶಸ್ತ್ರ ಸೀಮಾ ಬಲದ ಮಾಜಿ ಮುಖ್ಯಸ್ಥೆ ಅರ್ಚನಾ ರಾಮಸುಂದರಂ, ಮಹಾರಾಷ್ಟ್ರದ ಮಾಜಿ ಮುಖ್ಯ ಕಾರ್ಯದರ್ಶಿ ದಿನೇಶ್ ಕುಮಾರ್ ಜೈನ್, ಮಹೇಂದರ್ ಸಿಂಗ್ ಮತ್ತು ಡಾ.ಇಂದ್ರಜಿತ್ ಪ್ರಸಾದ್ ಗೌತಮ್.