ಧಾರವಾಡ,ಮಾ20(AZM):ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿತದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ೭ಕ್ಕೇರಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದ್ದು,ಈಗಾಗಲೇ ಐದು ಜನರ ಮೃತದೇಹವನ್ನು ಹೊರತೆಗೆಯಲಾಗಿದೆ.
ಮಂಗಳವಾರದಂದು ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಇನ್ನೂ 25 ಮಂದಿ ಸಿಲುಕಿರುವ ಸಾಧ್ಯತೆ ಇದೆ. ಎನ್ಡಿಆರ್ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ಸ್ಥಳೀಯರು ಹಾಗೂ ಕೆಲ ಸಂಘಟನೆಗಳ ಜನರೂ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದ್ದಾರೆ.
ಇಲ್ಲಿಯವರೆಗೆ ಸುಮಾರು 60 ಮಂದಿಯ ರಕ್ಷಣೆಯಾಗಿದೆ. ನೆಲಮಹಡಿಯಲ್ಲಿ ನಾಲ್ಕು ಮಂದಿಯ ಧ್ವನಿ ಕೇಳಿಬರುತ್ತಿದೆ. ಹೀಗಾಗಿ, ಬಹಳ ಸೂಕ್ಷ್ಮವಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ.
ಗಾಯಾಳುಗಳನ್ನ ಹುಬ್ಬಳ್ಳಿಯ ಖಾಸಗಿ ಹಾಗೂ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಇದೇ ಸಂದರ್ಭದಲ್ಲಿ, ಪೊಲೀಸ್ ಆಯುಕ್ತರು ಸ್ಥಾಪಿಸಿರುವ ಸಹಾಯ ಕೇಂದ್ರದಲ್ಲಿ 12 ಜನರು ಕಾಣೆಯಾಗಿರುವ ಬಗ್ಗೆ ದೂರುಗಳು ದಾಖಲಾಗಿದ್ದು, ಇವರು ಅವಶೇಷಗಳಡಿ ಸಿಲುಕಿರಬಹುದೆಂದು ಶಂಕಿಸಲಾಗಿದೆ