ನವದೆಹಲಿ, ಮಾ 26 (DaijiworldNews/HR): ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ. ಹಾಗಾಗಿ ನಾನು ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಅವರು ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ ಎಂದು ಆಕ್ರೋಶ ವ್ಯಲ್ತಪಡಿಸಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರ ಕಣ್ಣುಗಳಲ್ಲಿ ನಾನು ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದು ಹೇಳಿದ್ದಾರೆ.