ಚಂಡೀಗಡ, ಏ 01(DaijiworldNews/HR): "ಈ ದೇಶದ ಸರ್ವಾಧಿಕಾರ ಬಂದಾಗಲೆಲ್ಲಾ ಒಂದು ಕ್ರಾಂತಿಯೂ ಬಂದಿದೆ. ಈ ಬಾರಿ ರಾಹುಲ್ ಗಾಂಧಿ ಅವರ ರೂಪದಲ್ಲಿ ಕ್ರಾಂತಿ ಬಂದಿದೆ" ಎಂದು 10 ತಿಂಗಳ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಜೈಲಿನಿಂದ ಹೊರ ಬಂದ ಬಳಿಕ ಮಾತನಾಡಿದ ಅವರು, "ನನ್ನನ್ನು ಮಧ್ಯಾಹ್ನದ ಸುಮಾರಿಗೆ ಬಿಡುಗಡೆ ಮಾಡಬೇಕಿತ್ತು. ಆದರೆ ಜೈಲು ಅಧಿಕಾರಿಗಳು ತಡಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.
ಇನ್ನು "ರಾಹುಲ್ ಗಾಂಧಿ ಒಬ್ಬ ಕ್ರಾಂತಿಕಾರಿ ನಾಯಕ. ಅವರನ್ನು ಮತ್ತು ಇತರ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಲು ಕೇಂದ್ರವು ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದೆ ಎಂದು ನನಗೆ ತಿಳಿದಿದೆ. ಆದರೆ ಎಲ್ಲಾ ವಿಲಕ್ಷಣಗಳನ್ನು ಲೆಕ್ಕಿಸದೆ, ನಾನು ರಾಹುಲ್ ಮತ್ತು ಪ್ರಿಯಾಂಕಾ ಇಬ್ಬರ ಬೆಂಬಲಕ್ಕೆ ದೃಢವಾಗಿ ನಿಲ್ಲುತ್ತೇನೆ" ಎಂದು ಹೇಳಿದ್ದಾರೆ.
ಸಿಧು 1988ರಲ್ಲಿ ನಡೆಸಿದ್ದ ಹಲ್ಲೆಯಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎಂಬುವವರು ಕಾಣಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿಧು ಅವರಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ನೀಡಿತ್ತು. ಇದರ ಅನುಸಾರ ಸಿಧು ಅವರು ಕಳೆದ ವರ್ಷ ಮೇ 20 ರಂದು ಪಟಿಯಾಲ ನ್ಯಾಯಾಲಯಕ್ಕೆ ಶರಣಾಗಿದ್ದರು.