ಶಿವಮೊಗ್ಗ, ಏ 02 (DaijiworldNews/MS): ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಈ ಹಿಂದೆ ಎ. 5ರ ವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ವೇಳೆ ಹಲವು ಬಾರಿ ಯಂತ್ರೋಪಕರಣಗಳು ದುರಸ್ತಿಗೆ ಒಳಪಟ್ಟ ಕಾರಣ ಹೆಚ್ಚುವರಿ ಹತ್ತು ದಿನಗಳ ಕಾಲ ಸಂಚಾರ ನಿಷೇಧ ವಿಸ್ತರಿಸಲಾಗಿದೆ.
ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರೆ - 52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕು. ಘನ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕು.