ಬೆಂಗಳೂರು, ಏ 05 (DaijiworldNews/MS): ನಟ ಸುದೀಪ್ ಅವರು ರಾಜ್ಯ ರಾಜಕೀಯಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಸಿಎಂ ಕರೆದಿರುವ ಪತ್ರಿಕಾಗೋಷ್ಠಿ ಎಲ್ಲರ ಗಮನ ಸೆಳೆದಿದೆ.
ನಟ ಕಿಚ್ಚ ಸುದೀಪ್ ಬಿಜೆಪಿಗೆ ಸೇರುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿ ಸುದೀಪ್ ಬಿಜೆಪಿ ಸೇರುವ ವಿಚಾರದ ಬಗ್ಗೆ ನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸೋಲುವ ಭಯದಲ್ಲಿ ಈ ರೀತಿಯ ಸುದ್ದಿ ಹರಡುತ್ತಿದೆ. ಭ್ರಷ್ಟ BJP ಹರಡುತ್ತಿರುವ ಸುದ್ದಿ ಸುಳ್ಳು ಅಂತಾ ನಾನು ನಂಬುತ್ತೇನೆ. ನಮ್ಮ ಕಿಚ್ಚ ತಮ್ಮನ್ನು ತಾವು ಮಾರಿಕೊಳ್ಳುವವರಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಕಿಚ್ಚ ಸುದೀಪ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸುದೀಪ್ ಬಿಜೆಪಿ ಸೇರ್ಪಡೆಗೆ ನಮ್ಮದೇನು ಅಭ್ಯಂತರವಿಲ್ಲ ಪ್ರತಿಕ್ರಿಯಿಸಿದ್ದಾರೆ.