ಚಿಕ್ಕಮಗಳೂರು, ಏ 07 (DaijiworldNews/HR): ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಹಿರಿಯ ರಾಜಕಾರಣಿ ವೈ.ಎಸ್.ವಿ.ದತ್ತಾ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ.
ಅಭಿಮಾನಿಗಳಿಗೆ ಬಹಿರಂಗ ಪತ್ರ ಬರೆದಿರುವ ದತ್ತಾ, ಇಂದು ನನ್ನ-ನಿಮ್ಮ ಆತ್ಮಗೌರವ, ಸ್ವಾಭಿಮಾನಕ್ಕೆ ಅಪಮಾನವಾಗಿದೆ ಎಂದಿದ್ದು, ಭಾನುವಾರ ಬೆಳಗ್ಗೆ 11 ಗಂಟೆಗೆ ಸಭೆ ಸೇರುವಂತೆ ತಿಳಿಸಿದ್ದಾರೆ.
ಇನ್ನು ನನ್ನ ಬಳಿ ಹಣ-ಜಾತಿ ಇಲ್ಲದಿದ್ದರೂ ದತ್ತಣ್ಣ ಎಂದು ಕರೆದಿದ್ದೀರಾ. ಆತ್ಮೀಯತೆಯಿಂದ ತಬ್ಬಿಕೊಂಡು ಬೆಳೆಸಿದ್ದೀರಾ, ಪ್ರಸ್ತುತ ರಾಜಕೀಯ ಸ್ಥಿತಿಯಲ್ಲಿ ಒಬ್ಬರ ಜೊತೆ ಒಬ್ಬರಿರಬೇಕು. ನನ್ನ ಜೊತೆ ನೀವು, ನಿಮ್ಮ ಜೊತೆ ನಾನಿರಬೇಕು ಎಂದಿದ್ದಾರೆ.
ವೈ.ಎಸ್.ವಿ ದತ್ತಾ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದು, ಕಡೂರಿನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷೆಯಾಗಿದ್ದರು. ಕಡೂರಿನ ಕಾಂಗ್ರೆಸ್ ಟಿಕೆಟ್ ದತ್ತಾ ಅವರಿಗೆ ಎಂದು ಹೇಳಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಕೆ.ಎಸ್. ಆನಂದ್ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಹೆಸರು ಘೋಷಿಸಿದೆ.