ನೋಯ್ಡಾ, ಏ 07 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮುಗಿಸುವುದಾಗಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ ಲಕ್ನೋದ 16 ವರ್ಷದ ಬಾಲಕನ್ನು ನೋಯ್ಡಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಏಪ್ರಿಲ್ 5 ರಂದು ನೋಯ್ಡಾದ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದ್ದು, ಈ ವಿಷಯವನ್ನು ತನಿಖೆ ಮಾಡಲಾಯಿತು ಎಂದು ಸಹಾಯಕ ಪೊಲೀಸ್ ಆಯುಕ್ತ (ನೋಯ್ಡಾ) ರಜನೀಶ್ ವರ್ಮಾ ತಿಳಿಸಿದ್ದಾರೆ.
ಇನ್ನು ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.