ಚಿತ್ರದುರ್ಗ, ಏ 07 (DaijiworldNews/HR): ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ಜಿ. ರಘು ಆಚಾರ್ ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ರಘು ಆಚಾರ್ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ಶುಕ್ರವಾರ ಭೇಟಿ ಮಾಡಿ ಜೆಡಿಎಸ್ ಪಕ್ಷಕ್ಕೆ ಬರುವಂತೆ ಆಹ್ವಾನ ಕೊಟ್ಟಿದ್ದು, ಇದೀಗ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶರವಣ, ಎಪ್ರಿಲ್ 14ಕ್ಕೆ ರಘು ಆಚಾರ್ ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆ ಆಗಲಿದ್ದು, ಪಕ್ಷ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಇನ್ನು ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುತ್ತೇವೆ ಎಂದು ರಘು ಆಚಾರ್ ಅವರ ಬೆನ್ನಿಗೆ ಚೂರಿ ಹಾಕಿದ್ದು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಘು ಆಚಾರ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.