ಮೈಸೂರು, ಏ 08 (DaijiworldNews/MS): ದೇಶದಲ್ಲಿ ಹುಲಿಗಳ ಸಂರಕ್ಷಣೆಗಾಗಿ, ಆರಂಭಿಸಲಾಗಿದ್ದ ಪ್ರಾಜೆಕ್ಟ್ ಟೈಗರ್ ಮತ್ತು ಬಂಡೀಪುರ ಹುಲಿ ರಕ್ಷಿತಾರಣ್ಯಕ್ಕೆ 50 ಪೂರೈಸಿದ್ದು, ಇದಕ್ಕಾಗಿ ಮೂರು ದಿನಗಳ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಂದು ರಾತ್ರಿ 8. 40ಕ್ಕೆ ಮೈಸೂರಿಗೆ ಆಗಮಿಸಲಿದ್ದಾರೆ.
ಮೋದಿಯವರು ಮೈಸೂರಿನ ರ್ಯಾಡಿಸನ್ ಬ್ಲೂ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏ.9ರ ಬೆಳಗ್ಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣಿಸಲಿದ್ದಾರೆ. ಏ.9ರ ಬೆಳಗ್ಗೆ 11 ಗಂಟೆಗೆ ಕೆಎಸ್ಒಯು ಘಟಿಕೋತ್ಸವ ಭವನಕ್ಕೆ ಭೇಟಿ ನೀಡಲಿದ್ದು, ಹುಲಿ ಸಂರಕ್ಷಣಾ ಯೋಜನೆ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಳಿಕ ಚಾಮರಾಜನಗರ ಜಿಲ್ಲೆ ಬಂಡೀಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಏ.9ರ ಬೆಳಗ್ಗೆ 7.30ಕ್ಕೆ ಬಂಡೀಪುರ ಉದ್ಯಾನವನಕ್ಕೆ ಭೇಟಿ ನೀಡಲಿದ್ದು, ಬಳಿಕ ಸಫಾರಿ ಮಾಡಲಿದ್ದಾರೆ. ನೀಲಗಿರಿಸ್ ಅರಣ್ಯ ಪ್ರದೇಶಕ್ಕೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿಗೆ ವಾಪಸ್ ಆಗಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮೈಸೂರುಜಿ ಲ್ಲೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸುವ ಮೂಲಕ ಹೆಚ್ಚಿನ ಭದ್ರತೆಯನ್ನು ವಹಿಸಲಿದೆ.