ಬೆಂಗಳೂರು, ಏ 8(DaijiworldNews/HR): ನಟ ವಿನೋದ್ ರಾಜ್ ಅವರಿಗೆ ಈಗಾಗಲೇ ಮದುವೆಯಾಗಿ ಒಬ್ಬ ಮಗನೂ ಇದ್ದಾನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ನಿರ್ದೇಶಕ ಪ್ರಕಾಶ್ ರಾಜ್ ಮೆಹು ಅವರು ತಮ್ಮ ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಪ್ರಕಾಶ್ ರಾಜ್ ಮೆಹು, ಇದುವರೆಗಿನ ವಿವಾದಕ್ಕೆ ಎಷ್ಟೇ ಸ್ಪಷ್ಟನೆ ಕೊಟ್ಟರೂ ಕೆಲವರು ಒಪ್ಪುತ್ತಿರಲಿಲ್ಲ ಅಂತವರಿಗೆ ಇದು ಸತ್ಯ ಸಾಕ್ಷಿ!
ಮೊದಲನೆಯ ವಿಷಯ: ಲೀಲಾವತಿಯವರ ಗಂಡ ಮಹಾಲಿಂಗ ಭಾಗವತರ್ ಅನ್ನುವುದು. ಇದು ಈ ಕೆಳಗೆ ಕೊಟ್ಟಿರುವ ಲೀಲಾವತಿಯವರ ಚೆನ್ನೈ ಆಸ್ತಿಯ ಪತ್ರ ತಮಿಳು ಭಾಷೆಯಲ್ಲಿದೆ. ಅದರಲ್ಲಿ ಮಹಾಲಿಂಗ ಭಾಗವತರ್ ಅವರ ಪತ್ನಿ ಲೀಲಾವತಿ ಅಮ್ಮಾಳ್ (ಲೀಲಾವತಿಯಮ್ಮ) ಅನ್ನುವುದು ಸ್ಪಷ್ಟವಾಗಿದೆ!!
ಎರಡನೆಯ ವಿಷಯ: ವಿನೋದ್ ರಾಜ್ ಮದುವೆಯನ್ನೇ ಆಗದೆ ತಾಯಿಯ ಸೇವೆಯಲ್ಲಿ ನಿರತರಾಗಿದ್ದಾರೆ ಅನ್ನುವವರಿಗೆ ಮಾಹಿತಿ. ಈ ಕೆಳಗಿನ ಫೋಟೊದಲ್ಲಿ ಸೋಫಾ ಮೇಲೆ ಕುಳಿತಿರುವವರು ವಿನೋದ್ ರಾಜ್ ಹೆಂಡತಿ ಮತ್ತು ಮಗ, ಚೆನ್ನೈನಲ್ಲಿದ್ದಾರೆ ಮಗ ಇಂಜಿನಿಯರಿಂಗ್ ಓದುತ್ತಿದ್ದಾನೆ!!! ಎಂದು ಬರೆದುಕೊಂಡಿದ್ದಾರೆ.
ಇನ್ನು ವಿನೋದ್ ರಾಜ್ ಮತ್ತು ಲೀಲಾವತಿ ಅವರಿಬ್ಬರೇ ತಮ್ಮ ತೋಟದ ಮನೆಯಲ್ಲಿ ವಾಸವಾಗಿದ್ದು, ಈ ನಡುವೆಯೇ ವಿನೋದ್ ರಾಜ್ ಅವರಿಗೆ ಈಗಾಗಲೇ ಮದುವೆಯಾಗಿದೆ ಮತ್ತು ಒಬ್ಬ ಮಗನೂ ಇದ್ದಾನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.