ಚೆನ್ನೈ, ಏ 8 (DaijiworldNews/HR): ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ, ಕಾಂಗ್ರೆಸ್ನ ಹಿರಿಯ ನಾಯಕ ಸಿ ಆರ್ ಕೇಶವನ್ ಅವರು ಬಿಜೆಪಿಗೆ ಶನಿವಾರ ಸೇರ್ಪಡೆಗೊಂಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಕೇಶವನ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಕೇಶವನ್, ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ನನ್ನನ್ನು ಸೇರ್ಪಡೆಗೊಳಿಸಿಕೊಂಡಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ಎಂದರು.
ಇನ್ನು ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ-ಮುಕ್ತ ಆಡಳಿತ ಮತ್ತು ಸುಧಾರಣೆ-ನೇತೃತ್ವದ ಅಭಿವೃದ್ಧಿ ಕಾರ್ಯಸೂಚಿಗಳು ಭಾರತವನ್ನು ದುರ್ಬಲ ಆರ್ಥಿಕತೆಯಿಂದ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಗೆ ಸಾಗುವಂತೆ ಮಾಡಿದೆ ಎಂದಿದ್ದರು.