ನವದೆಹಲಿ,ಮಾ 23(MSP):ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರು ದೇಶದ ಮೊದಲ ಲೋಕಪಾಲರಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣ ಬೋಧಿಸಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. 66 ವರ್ಷದ ನ್ಯಾ.ಘೋಷ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯಿಂದ ಕೆಲವು ದಿನಗಳ ಹಿಂದೆಯಷ್ಟೇ ಆಯ್ಕೆಯಾಗಿದ್ದರು. ಭ್ರಷ್ಟಾಚಾರದ ಆರೋಪದಡಿ ಹಾಲಿ ಮತ್ತು ಮಾಜಿ ಪ್ರಧಾನಿ, ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದ್ಯಸರುಗಳನ್ನು ತನಿಖೆಗೆ ಒಳಪಡಿಸುವ ಅಧಿಕಾರವು ಲೋಕಪಾಲ್ಗೆ ನೀಡಲಾಗಿದೆ.
ಐದು ವರ್ಷಗಳ ಬಳಿಕ ಅಂದರೆ ಜನವರಿ 01, 2014ರಲ್ಲಿ ಲೋಕಪಾಲ ಮಸೂದೆಯನ್ನು ರಾಷ್ಟ್ರಪತಿಗಳಿಂದ ಅಂಗೀಕಾರ ಪಡೆದ ಬಳಿಕ ಘೋಷ್ ಅವರನ್ನು ನೇಮಿಸಲಾಗಿದೆ. 2017ರಲ್ಲಿ ನಿವೃತ್ತಿಹೊಂದಿದ ಇವರು ಈ ಹಿಂದೆ ಆಂಧ್ರ ಪ್ರದೇಶ ಹೈಕೋರ್ಟ ನ ಮುಖ್ಯ ನಾಯ್ಯಮೂರ್ತಿಯಾಗಿ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.