ತುಮಕೂರು,ಮಾ23(AZM):ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದು ಬಹುತೇಕ ಖಚಿತಗೊಂಡಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ತಿಳಿಸಿದ್ಧಾರೆ.
ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎಸ್. ಬಸವರಾಜು ಅವರು ಸ್ಪರ್ಧೆಗೆ ಇಳಿದಿದ್ದಾರೆ. ಕಾಂಗ್ರೆಸ್ನ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಆ ಸುದ್ದಿ ನಿಜವೇ ಆದರೆ ಬಂಡಾಯ ಕಾಂಗ್ರೆಸ್ಸಿಗರು ಸೋಮವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.
ಮುದ್ದಹನುಮೇಗೌಡರು ಸ್ಪರ್ಧಿಸಿದರೆ ತುಮಕೂರಿನಲ್ಲಿ ತ್ರಿಕೋನ ಫೈಟ್ ಸೃಷ್ಟಿಯಾಗಲಿದ್ದು, ಗೆಲುವು ಯಾರ ಪಾಲಾಗುತ್ತದೆ ಅನ್ನುವುದನ್ನು ಕಾದು ನೋಡಬೇಕಾಗಿದೆ. ತುಮಕೂರು ಹೊರತುಪಡಿಸಿ ಕಾಂಗ್ರೆಸ್ನ ಹಾಲಿ ಸಂಸದರೆಲ್ಲರೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಮೈತ್ರಿ ಸೀಟು ಹಂಚಿಕೆ ವೇಳೆ, ಕಾಂಗ್ರೆಸ್ ಪಕ್ಷವು ತುಮಕೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ.