ಬೆಂಗಳೂರು, ಏ 25 (DaijiworldNews/MS):ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ, ಪ್ರಚಾರ ಜಾತ್ಯಾತೀತ ಜನತಾ ದಳದ ಪರವಾಗಿ ಪ್ರಚಾರ ಮಾಡಲು ಈ ಬಾರಿ ತೆಲಂಗಾಣ ಸಿಎಂ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ಮತ್ತು ತೃಣಮೂಲ ಕಾಂಗ್ರೆಸ್ ಅಧಿನಾಯಕಿ, ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಆಗಮಿಸಲಿದ್ದಾರೆ ಎಂದು ವರದಿಯಾಗಿದೆ.
ಮೇ ಮೊದಲ ವಾರದಲ್ಲಿ ಈ ಇಬ್ಬರು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಮಮತಾ ಅವರು ಬೆಂಗಳೂರು, ಮೈಸೂರು ಜಿಲ್ಲೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಅದೇರೀತಿ ಕೆಸಿಆರ್ ಚಿಕ್ಕಬಳ್ಳಾಪುರ, ಕೋಲಾರ, ರಾಯಚೂರು, ಯಾದಗಿರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಜೆಡಿಎಸ್ ಪರ ಮತಯಾಚನೆ ಮಾಡಲಿದ್ದಾರೆ.
ಅಧಿಕಾರದ ಮೇಲೆ ಕಣ್ಣಿಟ್ಟಿರುವ ಜನತಾದಳ, ಪಕ್ಷ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವಂತೆ ಜನರು ಆಶೀರ್ವಾದ ಮಾಡಬೇಕು ಎಂದು ಪ್ರಚಾರ ಮಾಡುತ್ತಿದೆ.