ಮೈಸೂರು, ಏ 28 (DaijiworldNews/MS): ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ದೂರು ನೀಡಿದೆ.
ಮೈಸೂರು ಗ್ರಾಮಾಂತರ ಬಿಜೆಪಿ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ.
ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ವೇಳೆ ಹೇಳಿಕೆ ಪ್ರಿಯಾಂಕಾ ಗಾಂಧಿಯವರು, ಲಿಂಗಾಯತರಿಗೆ ಬಿಜೆಪಿ ಅವಮಾನಿಸಿದೆ ಎಂದು ಹೇಳುವ ಮೂಲಕ ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ನಿಯಮ ಉಲ್ಲಂಘನೆ ಆಗುತ್ತದೆ ಹೀಗಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದೆ.
ಮೊನ್ನೆ ತಾನೆ ಚುನಾವಣಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಮು ಗಲಭೆಗೆ ಪ್ರಚೋದನೆ ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು.