ನವದೆಹಲಿ, ಏ 28 (DaijiworldNews/HR): ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ಜಕೀರ್(20) ಬಂಧಿತ ಯುವಕ.
ಸೋಮವಾರದಂದು ಬಾಂಬ್ ಬೆದರಿಕೆ ಕರೆ ಬಂದಿದ್ದು, ಬಳಿಕ ವಿಮಾನ ನಿಲ್ದಾಣದಲ್ಲಿ ಶೋಧ ನಡೆಸಲಾಗಿತ್ತಲ್ಲದೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ಖಚಿತವಾಗಿತ್ತು.
ಇನ್ನು ಯುವಕನ ವಿರುದ್ಧ ದೂರು ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.