ಬೆಂಗಳೂರು,ಮಾ25(AZM):ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಿಗೆ ಮಾ.26 ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದ್ದರೂ ಎಷ್ಟೋ ಕ್ಷೇತ್ರಗಳಲ್ಲಿ ಇನ್ನೂ ಅಭ್ಯರ್ಥಿಗಳು ಫೈನಲ್ ಆಗಿಲ್ಲ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಯನ್ನು ಫೈನಲ್ ಮಾಡಿಲ್ಲ. ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಅವರೇ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಗ್ರಾಮಾಂತರ ಕ್ಷೇತ್ರಕ್ಕೆ ಇಂದು ರಾತ್ರಿ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆ ಇದೆ. ಕ್ಷೇತ್ರ ಹಂಚಿಕೆ ಸಂದರ್ಭದಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪಡೆದುಕೊಂಡಿದ್ದ ಜೆಡಿಎಸ್ ಅದನ್ನು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ನೀಡಿದೆ. ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ತೀರ್ಮಾನವಾಗಿಲ್ಲ..
ಮಂಗಳವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿರುವುದರಿಂದ ಇಂದು ರಾತ್ರಿಯೊಳಗೆ 14 ಕ್ಷೇತ್ರಗಳ ಎಲ್ಲಾ ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆಗಳಿವೆ.