ಬೆಂಗಳೂರು, ಏ 28 (DaijiworldNews/MS): ಪ್ರಧಾನಿ ಮೋದಿ ಅವರನ್ನ ವಿಷ ಸರ್ಪ ಅಂತಾ ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆ ನಂತರ ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದ್ಧಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಸೋನಿಯಾ ಗಾಂಧಿ ವಿಷಕನ್ಯೆನಾ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ದೇಶದ ಪ್ರಧಾನಿಯನ್ನು ಹೇಗೆ ಮಾತನಾಡಿಸಬೇಕು ಎಂಬುದು ಗೊತ್ತಿಲ್ಲ. ಇವತ್ತು ಮೋದಿಯವರನ್ನು ಇಡೀ ಜಗತ್ತು ಒಪ್ಪಿಕೊಂಡಿದೆ. ಅಮೆರಿಕಾ ಒಂದು ಕಾಲದಲ್ಲಿ ಭಾರತೀಯರಿಗೆ ವೀಸಾ ಕೊಡುತ್ತಿರಲಿಲ್ಲ. ಆದರೆ ಇವತ್ತು ನಮ್ಮ ಪ್ರಧಾನ ಮಂತ್ರಿಯನ್ನು ಕೆಂಪು ಹಾಸಿಗೆ ಮೂಲಕ ಸ್ವಾಗತ ಮಾಡಿ ಹೆಗಲ ಮೇಲೆ ಕೈ ಹಾಕಿಕೊಂಡು ಹೋಗುವಂತಹ ವಿಶ್ವ ನಾಯಕರಾಗಿದ್ದಾರೆ. ಅಂತಹವರನ್ನು ನಾಗರ ಹಾವಿಗೆ ಹೋಲಿಸಿದ್ದಾರೆ. ಸೋನಿಯಾ ಗಾಂಧಿ ಚೀನಾಮತ್ತು ಪಾಕಿಸ್ತಾನದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಹಾಗಿದ್ರೆ ಅವರೇನು ವಿಷಕನ್ಯೆನಾ ಎಂದು ಕೇಳಿದ್ದರು.
ಸದ್ಯ ನಿನ್ನೆ ಖರ್ಗೆಯವರ "ಮೋದಿ ವಿಷಸರ್ಪ" ಹೇಳಿಕೆಯಿಂದ ಬಿಜೆಪಿಗರು ಗರಂ ಆಗಿದ್ರೆ ಇಂದು, ಯತ್ನಾಳ್ ಹೇಳಿಕ ಕೂಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ವಾಗ್ದಾಳಿ ಮಾಡಿದ್ದಾರೆ. ಈ ಹೇಳಿಕೆ ಸಂಬಂಧ ಬಿಜೆಪಿ ನಾಯಕರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.