ಶ್ರೀನಗರ, ಏ 30 (DaijiworldNews/HR): ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭಾನುವಾರ ಮುಂಜಾನೆ 5.15ಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿಯಿಂದ 5 ಕಿ.ಮೀ. ಆಳದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಇನ್ನು ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.