ನವದೆಹಲಿ, ಮೇ 1 (DaijiworldNews/MS): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಬಿಜೆಪಿ ಪ್ರಣಾಳಿಕೆಯ ಹೈಲೈಟ್ಸ್ ಇಲ್ಲಿದೆ:
ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸುವುದಾಗಿ ಬಿಜೆಪಿ ಭರವಸೆ ನೀಡಿದೆ
‘ಪೋಷಣೆ’ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುವ ಭರವಸೆ.
ರಾಜ್ಯದಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
ಬಿಎಂಟಿಸಿ ಬಸ್ ಎಲೆಕ್ಟ್ರಿಕಲ್ ವೆಹಿಕಲ್ ಆಗಿ ಪರಿವರ್ತನೆ, ಎಲ್ಲೆಡೆ ಚಾರ್ಜಿಂಗ್ ಸ್ಟೇಷನ್ ತೆರಯಲಾಗುವುದು.
ಸೋಲಾರ್ ಪಂಪ್ ಸೆಟ್ ಬಳಸುವ ರೈತರಿಗೆ 80% ಸಬ್ಸಿಡಿ.
ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ 10 ಲಕ್ಷ ನಿವೇಶನಗಳನ್ನು ನೀಡುವ "ಸರ್ವ ಸೂರು ಯೋಜನೆ" ಜಾರಿ
ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಅರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ‘ಅಟಲ್ ಆಹಾರ ಕೇಂದ್ರ’ ಸ್ಥಾಪಿನೆ
ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.