ತಿರುವನಂತಪುರ,ಮೇ 02 (DaijiworldNews/MS):ಕೇರಳದಲ್ಲಿ ಕಳೆದ ವಾರವಷ್ಟೇ ಪ್ರಧಾನಿ ಚಾಲನೆ ನೀಡಿದ್ದ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಕಿಡಿಗೇಡಿಗಳು ಕಲ್ಲೆಸೆದು ವಿಕೃತಿ ಮೆರೆದಿದ್ದಾರೆ.
ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ಈ ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 25 ರಂದು ತಿರುವನಂತಪುರಂ ಸೆಂಟ್ರಲ್ ನಿಲ್ದಾಣದಲ್ಲಿ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದರು.
ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಒಂದು ಕೋಚ್ನ ವಿಂಡ್ಶೀಲ್ಡ್ಗೆ ಹಾನಿಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.
ಕಳೆದ ಮೂರು ತಿಂಗಳಲ್ಲಿ ಕಲ್ಲು ತೂರಾಟ ನಡೆದ ಮೂರನೇ ಘಟನೆ ಇದಾಗಿದೆ.