ನವದೆಹಲಿ, ಮೇ 02 (DaijiworldNews/HR): ಶರದ್ ಪವಾರ್ ಅವರು ನ್ಯಾಷನಲಿಷ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಂಗಳವಾರ ಹೇಳಿದ್ದಾರೆ.
ತಮ್ಮ ಲೋಕ್ ಮೇಜ್ ಸಂಗಟಿಯ ಎರಡನೇ ಆವೃತ್ತಿಯ ಬಿಡುಗಡೆ ವೇಳೆ, ನಾನು ಎನ್ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಶರದ್ ಪವಾರ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ನನ್ನ ಅಧಿಕಾರವಧಿ ಇನ್ನು ಮೂರು ವರ್ಷವಿದ್ದು, ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಈ ಮೂರು ವರ್ಷದ ಅವಧಿಯಲ್ಲಿ ರಾಜ್ಯ ಹಾಗೂ ದೇಶದ ವಿಚಾರಗಳತ್ತ ಗಮನ ಹರಿಸುತ್ತೇನೆ. ಬೇರೆ ಯಾವ ಹೆಚ್ಚಿನ ಜವಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದೇನೆ ಎಂದಿದ್ದಾರೆ.
ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳುವಾಗಲೇ ವೇದಿಕೆಯಲ್ಲಿ ನೆರದಿದ್ದ ನಾಯಕರು ಸೇರಿದಂತೆ ಹಲವಾರು ಮಂದಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.