ಹುಬ್ಬಳ್ಳಿ, ಮೇ 02 (DaijiworldNews/HR): ಬಜರಂಗದಳ ಬ್ಯಾನ್ ಮಾಡಲು ಮುಂದಾದರೆ ಹನುಮ ಭಕ್ತರು ನಿಮ್ಮ ಸರ್ಕಾರ ಹಾಗೂ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೇಶದ್ರೋಹಿ ಪಿ.ಎಫ್.ಐ ಬ್ಯಾನ್ ಮಾಡಿದ್ದಾರೆ. ಆದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಈ ದೇಶದ ಇತಿಹಾಸ, ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳಸುವ ಸಂಘಟನೆಯನ್ನು ಬ್ಯಾನ್ ಮಾಡುವುದಾಗಿ ಘೋಷಿಸಿದ್ದು, ಸಂಘಟನೆ ತಂಟೆಗೆ ಹೋದರೆ ಹನುಮ ಭಕ್ತರು ನಿಮ್ಮ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತಾರೆ ಎಂದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಕಾಂಗ್ರೆಸ್ ನವರಿಗೆ ಧಮ್ಮು ತಾಕತ್ತಿದ್ದರೆ ಬಜರಂಗದಳ ಬ್ಯಾನ್ ಮಾಡಲಿ ನೋಡೋಣ. ಡಿ.ಕೆ.ಶಿವಕುಮಾರ ನನ್ನ ನಾಲಿಗೆ ಕತ್ತರಿಸುತ್ತೇನೆ ಎಂದು ಹೇಳಿದ್ದಾರೆ.