ಮೈಸೂರು, ಮೇ 04 (DaijiworldNews/MS): ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿ ಎಂದು ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಬಜರಂಗದಳ ನಿಷೇಧ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ? ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತ ಹೆಸರು ಇಟ್ಟು ಕೊಂಡವರೆಲ್ಲಾ ಆಂಜನೇಯ ಆಗಲ್ಲ ಎಂದು ಟೀಕಿಸಿದ್ದಾರೆ.
ಕರ್ನಾಟಕದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ? ಬಜರಂಗದಳ ಸಂಘಟನೆ ನೈತಿಕ ಪೊಲೀಸ್ಗಿರಿ ಮಾಡುತ್ತಿದ್ದು, ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿ ಒತ್ತು ಹಾಗೂ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ. ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದು ತಿರುಗೇಟು ನೀಡಿದರು.