ನವದೆಹಲಿ, ಮೇ 09 (DaijiworldNews/MS): ಸಹಜೀವನ ಸಂಗಾತಿ ಶ್ರದ್ಧಾ ವಾಕರ್ನನ್ನು ಹತ್ಯೆಗೈದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪಿ ಅಫ್ತಾಬ್ ಅಮೀನ್ ಪೂನವಾಲಾ ವಿರುದ್ಧ ದೆಹಲಿಯ ಸಾಕೇತ್ ಕೋರ್ಟ್ ಮಂಗಳವಾರ ಆರೋಪ ಪಟ್ಟಿ ಮಾಡಿದೆ.
ಆರೋಪಿ ಅಫ್ತಾಬ್ ವಿರುದ್ಧ ನ್ಯಾಯಾಲಯವು ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಆರೋಪ ಹೊರಿಸಿದೆ.
ಆದರೆ ಆರೋಪಿ ಅಫ್ತಾಬ್ ಪೂನಾವಾಲಾ ತನ್ನ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದು, ನಾನು ವಿಚಾರಣೆಯನ್ನು ಎದುರಿಸುತ್ತೇನೆ ಮತ್ತು ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್ತೇನೆ ಎಂದು ಹೇಳಿದ್ದಾನೆ. ಮುಂದಿನ ವಿಚಾರಣೆಗಾಗಿ ಜೂನ್ 1ಕ್ಕೆ ನಿಗದಿಪಡಿಸಲಾಗಿದೆ.
ದೆಹಲಿ ಪೊಲೀಸರು ಜನವರಿ 24 ರಂದು ಪ್ರಕರಣದಲ್ಲಿ 6,629 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.