ಗೋವಾ, ಮೇ 09 (DaijiworldNews/HR): ಕರ್ನಾಟಕ ವಿಧಾನಸಭಾ ಚುನಾವಣೆಗೆ ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನ ಸಹಿತ ರಜೆ ನೀಡಿದೆ.
ಸಿಎಂ ಪ್ರಮೋದ್ ಸಾವಂತ್
ಗೋವಾ ಮುಖ್ಯಮಂತ್ರಿ ಸಿಎಂ ಪ್ರಮೋದ್ ಸಾವಂತ್ ಸರ್ಕಾರ ಈ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ವಿರೋಧ ಪಕ್ಷಗಳು ಮತ್ತು ಖಾಸಗಿ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ.
ಇನ್ನು ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಗೋವಾ ಸ್ಟೇಟ್ ಇಂಡಸ್ತ್ರೀಸ್ ಅಸೋಸಿಯೇಶನ್ ವಿರೋಧ ವ್ಯಕ್ತಪಡಿಸಿದ್ದು, ಇದು ಸಂಪೂರ್ಣ ಅಸಂಬದ್ಧವಾದದ್ದು. ಮೂರ್ಖತನದ ತೀರ್ಮಾನವಾಗಿದೆ ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್ ಹೇಳಿದ್ದಾರೆ.