ಚೆನೈ,ಮೇ9(Daijiworld News/KH):ಮಂಗಳವಾರದಂದು ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದ ವೇಳೆ ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್ಐ ಪ್ರಕಾರಣದ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಎನ್ಐಎ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಸೇರಿದಂತೆ ಆರು ಜಿಲ್ಲೆಗಳ ಪ್ರದೇಶಗಳಲ್ಲಿ ಕಾರ್ಯಚರಣೆ ನಡೆಯುತ್ತಿದೆ. ಈ ಪ್ರಕರಣ ಸೆ. 19 ರಂದು ದಾಖಲಾದಾಗಿನಿಂದ ಇಲ್ಲಿಯವರೆಗೆ 10 ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಹಲವಾರು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು , ಆರೋಪಿಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿದ್ದು, ಅಲ್ಲದೆ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಯುವಕರ ಗುಂಪಿಗೆ ಮಾರಕಾಸ್ತ್ರಗಳನ್ನು ಬಳಕೆ ಮಾಡುವ ತರಬೇತಿ ನೀಡಿತ್ತಿದ್ದಾರೆ ಎಂದು ಎನ್ಐಎ ಆರೋಪಿಸಿತ್ತು.
ರಾಜ್ಯದ ಪೊಲೀಸರು ಹಾಗೂ ಎನ್ಐಎ ನಡೆಸಿದ ತನಿಖೆ ವೇಳೆಯಲ್ಲಿ ಪಿಎಫ್ಐ ಸಂಘಟನೆ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿರಬಹುದು ಎಂದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್ನಲ್ಲಿ ಪಿಎಫ್ಐ ಹಾಗೂ ಅದರ ಅನೇಕ ಅಂಗಸಂಸ್ಥೆಗಳನ್ನು ಗೃಹ ಸಚಿವಾಲಯ, ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿತ್ತು.