ಬೆಳಗಾವಿ, ಮೇ 10 (DaijiworldNews/MS): ಗೋಕಾಕ್ ಕ್ಷೇತ್ರದಲ್ಲಿ ಮತದಾನ ಮಾಡಿದ ಬಳಿಕ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ʻನಿನ್ನೆ ರಾತ್ರಿ 12:30ರವರೆಗೂ ಡಿಕೆಶಿ ನನಗೆ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನೀನು ಹಿಂದೆ ಸರಿಯದಿದ್ದರೆ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೆದರಿಸಿದ. ಅದ್ಯಾವ ಸಿಡಿ ಬಿಡುಗಡೆ ಮಾಡು ಎಂದಿದ್ದೇನೆ. ಡಿಕೆಶಿ ಇನ್ನುಮುಂದೆಯಾದರೂ ಆ ʻವಿಷಕನ್ಯೆʼಯಿಂದ ದೂರವಿದ್ದರೆ ಒಳ್ಳೆಯದುʼ ಎಂದು ಹೇಳಿದ್ದಾರೆ.
ಈ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತಮ್ಮ ವಿರುದ್ಧ ಕೇಳಿಬಂದ ಗಂಭೀರ ಆರೋಪದಿಂದ ಸಚಿವ ಸ್ಥಾನ ಕಳೆದುಕೊಂಡ ಸಿ ಡಿ ಪ್ರಕರಣ ಸೇರಿದಂತೆ ಕೆಲವು ಕೇಸುಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.