ಬೆಂಗಳೂರು, ಮೇ 13(DaijiworldNews/MS): ಇಂದು ಮಧ್ಯಾಹ್ನದ ವೇಳೆ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಪರೇಷನ್ ಕಮಲದ ಭೀತಿ ಶುರುವಾಗಿದೆ.
ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಅತಂತ್ರ ಸರ್ಕಾರದ ಮುನ್ಸೂಚನೆ ಬಂದಿರುವುದರಿಂದ ಕಾಂಗ್ರೆಸ್ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದೆ.
ಈ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಅವರನ್ನು ಬೆಂಗಳೂರಿಗೆ ಕರೆತರಲು ನಿರ್ಧರಿಸಲಾಗಿದೆ. ಈ ಸಂಬಂಧ ಉಸ್ತುವಾರಿ ನೀಡಿ ಇಬ್ಬರನ್ನು ಪ್ರತಿ ಜಿಲ್ಲೆಗೆ ಕಳುಹಿಸಲಾಗಿದೆ. ಬಳಿಕ ಫಲಿತಾಂಶದ ಬೆಳವಣಿಗೆ ನೋಡಿಕೊಂಡು ಗೆದ್ದ ಅಭ್ಯರ್ಥಿಗಳನ್ನು ಹೊರವಲಯದ ರೆಸಾರ್ಟ್ಗೆ ಕರೆದೊಯ್ಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.