ನವದೆಹಲಿ, ಮಾ27(SS): ಮೋದಿ ಟೀಕಾಕಾರರಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಪಕ್ಷ ತೊರೆದು ಮಾ.28 ರಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ನಾಯಕರು ಶತೃಘ್ನ ಸಿನ್ಹಾ ಕಾಂಗ್ರೆಸ್ ಸೇರುತ್ತಿರುವ ವಿಷಯವನ್ನು ಘೋಷಿಸಿದ್ದು, ಪಾಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ನ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಹೇಳಿದ್ದಾರೆ.
ಪಾಟ್ನಾಸಾಹೀಬ್ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸಿ ಗೆದ್ದಿದ್ದ ಶತೃಘ್ನ ಸಿನ್ಹಾ, ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯಿಂದ ಶತೃಘ್ನ ಸಿನ್ಹಾ ವಿರುದ್ಧ ಸಚಿವ ರವಿಶಂಕರ್ ಪ್ರಸಾದ್ ಸ್ಪರ್ಧಿಸಲಿದ್ದಾರೆ.