ಬೆಂಗಳೂರು,ಮಾ27(AZM): ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯ ನಟ ಕಿಚ್ಚ ಸುದೀಪ್ ಅವರ ವಿರುದ್ಧ ಜಾರಿ ಮಾಡಿದ್ದ ಅರೆಸ್ಟ್ ವಾರೆಂಟ್ ಅನ್ನ ಹೈ ಕೋರ್ಟ್ ತಡೆ ಹಿಡಿದಿದೆ.
ಕಿಚ್ಚ ಸುದೀಪ್ ಅವರ ವಿರುದ್ಧ ವಾರಸ್ದಾರ ಧಾರಾವಾಹಿಯ ಶೂಟಿಂಗ್ ಗಾಗಿ ಬಳಸಿದ್ದ ಮನೆ ಬಾಡಿಗೆ ಕಟ್ಟದ ಆರೋಪದ ಹಿನ್ನಲೆಯಲ್ಲಿ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದ್ದು, ಪ್ರಕರಣವನ್ನು ಕೈಗೆತ್ತಿಕೊಂಡ ಹೈ ಕೋರ್ಟ್ ವಿಚಾರಣೆಯನ್ನ ಏಪ್ರಿಲ್ 22ಕ್ಕೆ ಮುಂದೂಡಿದೆ. ಹಾಗೂ ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದೆ.
ದೀಪಕ್ ಮಯೂರ್ ಎಂಬುವವರು ಸುದೀಪ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯ ಮಾ.೨೬ರಂದು ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.