ಬೆಂಗಳೂರು, ಮಾ 28 (MSP): ರಾಜ್ಯದ ವಿವಿಧೆಡೆ ರಾಜಕಾರಣಿಗಳು ಹಾಗೂ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾ.28 ರ ಗುರುವಾರ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
'ಇದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಅಸಲಿ ಸರ್ಜಿಕಲ್ ಸ್ಟ್ರೈಕ್ . ಆದರೆ ಇದನ್ನು ಮಾಡಿದವರು ಮಾತ್ರ ಆದಾಯ ತೆರಿಗೆ ಇಲಾಖೆ. ಐಟಿ ಅಧಿಕಾರಿ ಬಾಲಕೃಷ್ಣಗೆ ಅವರಿಗೆ ನೀಡಲಾಗಿರುವ ಸಾಂವಿಧಾನಿಕ ಹುದ್ದೆಯನ್ನು ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ. ಚುನಾವಣೆಯ ಸಮಯದಲ್ಲಿ ಸರ್ಕಾರಿ ಆಡಳಿತ ಯಂತ್ರ ಹಾಗೂ ಭ್ರಷ್ಟ ಅಧಿಕಾರಿಗಳನ್ನ ಬಳಸಿಕೊಂಡಿರುವುದು ಪ್ರತಿ ಪಕ್ಷಗಳ ವಿರುದ್ದ ಬಳಸುವುದು ಶೋಚನೀಯ' ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.