ಬೆಂಗಳೂರು,ಮಾ31(AZM):ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಹಾಗೆಯೇ ರಾಜ್ಯ ಸರ್ಕಾರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿದೆ. ಜ.೧ರಿಂದಲೇ ಸರಕಾರಿ ನೌಕರರ ವೇತನ ಹೆಚ್ಚಳದ ಆದೇಶ ಹೊರಡಿಸಲಾಗಿದ್ದು, ತುಟ್ಟಿಭತ್ಯೆಯ ಮೂಲ ವೇತನ ಶೇ 3.75ರಿಂದ ಶೇ 6.50ಕ್ಕೆ ಹೆಚ್ಚಿಸಿದೆ.
ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿ ಪೂರ್ಣ ನೌಕರರಿಗೆ ಮತ್ತು ಅರೆಕಾಲಿಕ ನೌಕರಿ ವೇತನ ಶ್ರೇಣಿಯಲ್ಲಿರುವ, ಪೂರ್ಣ ಅವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗು ಸರ್ಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರುಗಳಿಗೆ ಈ ಆದೇಶ ಅನ್ವಯವಾಗಲಿದೆ.