ಬೆಂಗಳೂರು,ಮಾ29(AZM):ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ದೂರು ಸಲ್ಲಿಸಿದೆ.
ತೇಜಸ್ವಿ ಸೂರ್ಯ "ಮೋದಿಯನ್ನು ವಿರೋಧಿಸುವವರು ದೇಶವನ್ನು ವಿರೋಧಿಸುವಂತೆ" ಎನ್ನುವ ಹೇಳಿಕೆಯನ್ನು ನೀಡಿದ್ದು, ಇದೀಗ ತೇಜಸ್ವಿ ವಿರುದ್ಧ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ.
ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಾಗಿ ಚುನಾವಣಾ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡುವ ಮೂಲಕ ಮತದಾರರನ್ನು ಬೆದರಿಸುವ ಯತ್ನ ನಡೆಸಿದ್ದಾರೆ. ಈ ಅಭ್ಯರ್ಥಿಯನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ದಾಖಲಿಸಲಾಗಿದೆ.
ಮೋದಿಯನ್ನು ವಿರೋಧಿಸುವವರು ದೇಶವನ್ನು ವಿರೋಧಿಸುವಂತೆ ಎಂಬ ತೇಜಸ್ವಿಯವರ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ.