ಮಹಾರಾಷ್ಟ್ರ, ಮೇ 14 (DaijiworldNews/HR): ಆಕ್ಷೇಪಾರ್ಹ ಪೋಸ್ಟ್ನಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಧಾರ್ಮಿಕ ಮುಖಂಡರೊಬ್ಬರ ಕುರಿತಾದ ಆಕ್ಷೇಪಾರ್ಹ ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿದ ಪರಿಣಾಮ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಘರ್ಷಣೆ ಸಂಭವಿಸಿದೆ.
ಇನ್ನು ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಲು ಯತ್ನಿಸಿದ್ದಾರೆ. ಆದರೆ ಎರಡು ಗಂಪುಗಳ ನಡುವೆ ಮಾತುಕತೆ ಘರ್ಷಣೆಗೆ ತಿರುಗಿದ್ದು, ಪರಿಣಾಮ ರಸ್ತೆಬದಿಯಿದ್ದ ವಾಹನಗಳಿಗೆ ಬೆಂಕಿ ಇಟ್ಟು, ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಈವರೆಗೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 15 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.