ಮುಂಬೈ, ಮೇ 14 (DaijiworldNews/HR): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದ್ದು, ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಮುಗಿದಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯ ಸೋಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದರು.
ಇನ್ನು ಚುನಾವಣಾ ಪ್ರಚಾರದ ವೇಳೆಯಲ್ಲಿ ಪ್ರಧಾನಿ ಮೋದಿ, ಜೈ ಬಜರಂಗ ಬಲಿ ಘೋಷಣೆ ಕೂಗಿ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದರು. ಆದ್ದರಿಂದ ಈ ಚುನಾವಣಾ ಫಲಿತಾಂಶದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ಸೋಲಾಗಿದೆ ಎಂದಿದ್ದಾರೆ.
ಕರ್ನಾಟಕದ ಚುನಾವಣೆಯಲ್ಲಿ ಬಂದಿರುವ ಫಲಿತಾಂಶ 2024ರ ಲೋಕಸಭಾ ಚುನಾವಣೆಯಲ್ಲಿಯೂ ಬರಲಿದೆ ಎಂದು ಹೇಳಿದ್ದಾರೆ.