ಬೆಂಗಳೂರು, ಮೇ 14 (DaijiworldNews/MS): ಬಿಜೆಪಿ ಸರ್ಕಾರದ ಅಧಿಕಾರಾವಧಿ ಪೂರ್ಣಗೊಂಡು ಕಾಂಗ್ರೆಸ್ ಹೊಸ ಸರ್ಕಾರ ರಚಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಅಡ್ವಕೇಟ್ ಜನರಲ್ ಹುದ್ದೆಗೆ ಪ್ರಭುಲಿಂಗ ನಾವದಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿಯಾದ ಎಜೆ ಪ್ರಭುಲಿಂಗ ನಾವದಗಿ, ತಮ್ಮ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಬಹುಮತ ಪಡೆದುಕೊಂಡಿರುವ ಕಾರಣ ನಿನ್ನೆಯಷ್ಟೇ ಸಿಎಂ ಸ್ಥಾನಕ್ಕೆ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು.
2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.೨018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು