ಪಂಜಾಬ್, ಮೇ 15 (DaijiworldNews/HR): 100 ಕೋಟಿ ರೂ. ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಭಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಇನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ (ಹಿರಿಯ ವಿಭಾಗ) ರಮಣದೀಪ್ ಕೌರ್ ಜುಲೈ 10 ರಂದು ಖರ್ಗೆ ಅವರಿಗೆ ಸಮನ್ಸ್ ನೀಡಿದ್ದಾರೆ.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ ಎಂದು ಹಿತೇಶ್ ಹೇಳಿದ್ದಾರೆ.
ಇನ್ನು ಪ್ರಣಾಳಿಕೆಯ ಪುಟ ಸಂಖ್ಯೆ 10 ರಲ್ಲಿ, ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಚುನಾವಣೆಯಲ್ಲಿ ಗೆದ್ದರೆ ಅದನ್ನು ನಿಷೇಧಿಸುವುದಾಗಿ ಭರವಸೆ ನೀಡಿರುವುದನ್ನು ಕಂಡು ನಾನು ನ್ಯಾಯಾಲಯಕ್ಕೆ ಹೋಗಿದ್ದೇನೆ ಎಂದು ತಿಳಿಸಿದ್ದಾರೆ.