ನವದೆಹಲಿ, ಮೇ 17 (DaijiworldNews/MS): ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬುಧವಾರ ಮಧ್ಯಾಹ್ನ ಹೇಳಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಮುಂದುವರಿದಂತಾಗಿದೆ.
ಹೈಕಮಾಂಡ್ ಜತೆ ಹಲವು ಸುತ್ತಿನ ಸಭೆಗಳ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯ ನಿವಾಸದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಅದಲ್ಲದೇ ಮುಂದಿನ 24 ಗಂಟೆಯಲ್ಲಿ ನೂತನ ಸಿಎಂ ಕರ್ನಾಟಕದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ . ಮುಂದಿನ 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದ ಎಂದು ಹೇಳಿದ್ದಾರೆ.