ಚೆನ್ನೈ, ಮೇ 18 (DaijiworldNews/SM): ಸಿದ್ದರಾಮಯ್ಯ ಅವರು ರಾಜ್ಯದ ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಇಂದು ಸ್ಟಾಲಿನ್ ಅವರಿಗೆ ಕರೆ ಮಾಡಿ ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ ಮತ್ತು ಜೆಡಿಎಸ್ ಕ್ರಮವಾಗಿ 66 ಮತ್ತು 19 ಸ್ಥಾನಗಳನ್ನು ಗಳಿಸಿತು.