ಅಹಮದಾಬಾದ್ ಮೇ 19 (DaijiworldNews/MS): ಗುಜರಾತ್ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಅವರು ರಸ್ತೆ ಅಪಘಾತದಲ್ಲಿ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ.
ಗುಜರಾತ್ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ನ ಅವರು ಪ್ರಯಾಣಿಸುತ್ತಿದ್ದ ಕಾರು ಬುಲ್ಡೋಜರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ವಂಡಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30 ರ ಸುಮಾರಿಗೆ ಅಪಘಾತ ಸಂಭವಿಸಿದೆ.
ವಘಾಸಿಯಾ ಅವರು ಸಾವರಕುಂಡ್ಲಾ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿ ಶಾಸಕರಾಗಿದ್ದರು, ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.