ನವದೆಹಲಿ,ಮೇ19(DaijiworldNews/KH):ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಜಪಾನ್, ಪಪ್ಪುವ ನ್ಯೂ ಗಿನಿಯಾ, ಆಸ್ಟ್ರೇಲಿಯಾ, 3 ದೇಶಗಳಿಗೆ 6 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಜಪಾನ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 7 ರಾಷ್ಟ್ರಗಳ ಪ್ರತಿನಿಧಿಗಳ G7 ಕ್ವಾಡ್ ಶೃಂಗಸಭೆಯಲ್ಲೂ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ 9 ಗಂಟೆಗೆ ಭಾರತದಿಂದ ಹೊರಡಿ ಜಪಾನ್ ತಲುಪಲಿದ್ದಾರೆ. ಜಪಾನ್ನಲ್ಲಿ 2ನೇ ಮಹಾಯುದ್ಧದ ಸಂದರ್ಭದಲ್ಲಿ ನಡೆದ ಪರಮಾಣು ಬಾಂಬ್ ದಾಳಿಗೆ ತುತ್ತಾದ ಹಿರೋಷಿಮಾ
ನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಜಪಾನ್ನ ಹಲವು ಕಾರ್ಯಕ್ರಮಗಳಲ್ಲಿ ಮೇ 19ರಿಂದ ಮೇ 21ರವರೆಗೂ ಭಾಗಿಯಾಗಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್, ಜಪಾನ್ ಪ್ರಧಾನಿ, ಆಸ್ಟ್ರೇಲಿಯಾ ಪ್ರಧಾನಿಗಳ ನಿಯೋಗ ಕೂಡ ಭಾಗವಹಿಸಲಿದೆ. ಈ ಸಭೆಯಲ್ಲಿ ಜಾಗತಿಕ ಆರ್ಥಿಕ ಸವಾಲುಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ವಿಶ್ವದ ಪ್ರಮುಖ ನಾಯಕ ದ್ವಿಪಕ್ಷೀಯ ಮಾತಕತೆಗಳು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.
ಜಿ-7 ಶೃಂಗಸಭೆಯ ನಂತರ ಮೇ 22ರಂದು ಪಪುವಾ ನ್ಯೂಗಿನಿಯಾಗೆ ತೆರಳಲಿದ್ದಾರೆ. ಅಲ್ಲಿನ ಪ್ರಧಾನಿ ಜೇಮ್ಸ್ ಮರಾಪೆ ಜತೆ ಮಾತುಕತೆ ನಡೆಸಲಿದ್ದಾರೆ. ಜಂಟಿಯಾಗಿ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರಕ್ಕೆ ಸಂಬಂಧಿಸಿದ (ಎಫ್ಪಿಐಸಿ III ಶೃಂಗಸಭೆ) ಮೂರನೇ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಅವರು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿ ಮೇ 22-24ರ ನಡುವೆ ಆಸ್ಟ್ರೇಲಿಯಾದಲ್ಲಿ ಇರಲಿದ್ದಾರೆ. ಆ ಬಳಿಕ ಭಾರತಕ್ಕೆ ಮರಳಲಿದ್ದಾರೆ. ಮೇ 23 ರಂದು ಅವರು ಸಿಡ್ನಿಯಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.