ನವದೆಹಲಿ, ಮೇ 19 (DaijiworldNews/HR): ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನಿರ್ಧರಿಸಿದೆ.
ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿದೆ ಎಂದು ಆರ್ಬಿಐ ಶುಕ್ರವಾರ ಹೇಳಿದೆ.
ಇನನು 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದಾಗಿದೆ.