ಬೆಂಗಳೂರು, ಮೇ 21 (DaijiworldNews/SM): ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ನಿರುದ್ಯೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.
"ರಾಜ್ಯದಲ್ಲಿ ಒಟ್ಟಾರೆ 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, ನಮ್ಮ ಸರ್ಕಾರದಿಂದ ನಿರುದ್ಯೋಗಿ ಯುವಕ-ಯುವತಿಯರಿಗೆ ಕೇವಲ ಹಣ ನೀಡಿದರೆ ನಿರುದ್ಯೋಗ ಹೋಗಲ್ಲ, ಬದಲಾಗಿ ಉದ್ಯೋಗ ನೀಡಬೇಕು. ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಎಲ್ಲ 2.5 ಲಕ್ಷ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ," ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕೇವಲ 135 ಸ್ಥಾನಗಳಿಂದ ನನಗೆ ಸಂತೋಷವಿಲ್ಲ ಎಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್! ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, "ನಿರುದ್ಯೋಗ ನಿರ್ಮೂಲನೆ ಮಾಡಲು ಉದ್ಯೋಗಗಳು ಸೃಷ್ಟಿಯಾಗಬೇಕು. ಯಾವುದೇ ಸ್ಕೀಮ್ ಅಥವಾ ಉಚಿತ ಯೋಜನೆಗಳು ಜೀವನಪೂರ್ತಿಯಾಗಿ ನೀಡಲು ಸಾಧ್ಯವಿಲ್ಲ. ಶೀಘ್ರದಲ್ಲೇ ಉದ್ಯೋಗ ಭರ್ತಿಗೆ ಕ್ರಮ ಕೈಗೊಳ್ಳುತ್ತೇವೆ," ಎಂದು ತಿಳಿಸಿದರು.