ಬೆಂಗಳೂರು, ಮೇ 22 (DaijiworldNews/SM): 12 ವರ್ಷದ ನಂತರ ಗಾಲಿ ಜನಾರ್ದನ ರೆಡ್ಡಿ ಶಾಸಕರಾಗಿ ಆಯ್ಕೆಯಾಗಿದ್ದು, ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ಜನರು ನಮ್ಮ ಪಕ್ಷಕ್ಕೆ ಸಾಕಷ್ಟು ಆಶೀರ್ವಾದ ಮಾಡಿದ್ರು. ನಾನು ಗೆದ್ದು ವಿಧಾನಸೌಧ ಪ್ರವೇಶ ಮಾಡಿದ್ದೇನೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
16ನೇ ವಿಧಾನಸಭೆ ಅಧಿವೇಶನ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಎರಡು ದಿನಗಳ ಕಾಲ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೋಮವಾರ ಪ್ರಮಾಣ ವಚನ ಸ್ವೀಕಿರಿಸುವ ಹಿನ್ನಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, 12 ವರ್ಷಗ ಬಳಿಕ ವಿಧಾನಸೌಧದಕ್ಕೆ ಆಗಮಿಸಿದ್ದೇನೆ ಎಂದು ಹೇಳಿದ್ದಾರೆ.
ಕರ್ನಾಟಕದ ಜನರ ಒಳಿತಿಗಾಗಿ ಕಲ್ಯಾಣ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನಾನು ಒಬ್ಬನೇ ಗೆದ್ದು ವಿಧಾನಸೌಧಕ್ಕೆ ಹೆಜ್ಜೆ ಇಟ್ಟಿದ್ದೆನೆ, ಬರುವಂತ ದಿನಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಹುಮತದಿಂದ ವಿಧಾನಸೌಧಕ್ಕೆ ಬರ್ತೆನೆ. ಜನಪರವಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನನ್ನ ಬೆಂಬಲ ಇರುತ್ತದೆ, ಸದನದಲ್ಲಿ ಜನಪರ ಮಸೂದೆ ಮಂಡಿಸುವಾಗ ನನ್ನ ಬೆಂಬಲ ಖಂಡಿತ ಇರುತ್ತೆ. ಯಾರಿಗೆ ನನ್ನ ಅವಕಾಶ ಇರುತ್ತದೆಯೋ ಅವರಿಗೆ ನನ್ನ ಬೆಂಬಲ ಕೊಡುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಈ ವೇಳೆ ಯು.ಟಿ ಖಾದರ್ ಮಾತನಾಡಿ, ಕೋಮುವಾದ ಹಾಗೂ ಸಂವಿಧಾನದ ನಡುವೆ ನಡೆದ ಚುನಾವಣೆ ಆಗಿತ್ತು. ಕೋಮುವಾದ ಸೋತಿದೆ ಸಂವಿಧಾನ ಗೆದ್ದಿದೆ, ಜನ ಸಂವಿಧಾನದ ಪರವಾಗಿ ಇರುವ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಸಚಿವ ಸ್ಥಾನದ ವಿಚಾರವಾಗಿ ಎಲ್ಲಾ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಮ್ಮ ಪಕ್ಷದಲ್ಲಿ ಯಾವಾಗಲೂ ಅರ್ಹರಿಗೆ ಸೂಕ್ತ ಸ್ಥಾನಮಾನ ಸಿಗುತ್ತೆ, ಹೀಗಾಗಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧ, ಯಾವುದೇ ಅಪೇಕ್ಷೆ ಇಲ್ಲದೇ ಸರ್ಕಾರದ ಜೊತೆಗೆ ಇರುತ್ತೇನೆ ಎಂದು ಒಹೇಳಿದ್ದಾರೆ.