ಬೆಂಗಳೂರು, ಮೇ 22 (DaijiworldNews/SM): ರಾಜಧಾನಿ ಬೆಂಗಳೂರಿನಲ್ಲಿ ಮೇ 21ರಂದು ಕೇವಲ 1 ಗಂಟೆ ಸುರಿದ ಭಾರೀ ಮಳೆಗೆ ಉಂಟಾದ ಅವಾಂತರಗಳಿಂದಾಗಿ ನಗರವಾಸಿಗಳು ರೋಸಿ ಹೋಗಿದ್ದಾರೆ. ಕೆಆರ್ ಸರ್ಕಲ್ನ ಅಂಡರ್ಪಾಸ್ನಲ್ಲಿ ಸಿಲುಕಿ ಯುವತಿ ಸಾವನ್ನಪ್ಪಿದ್ದು, ದುರಂತ.
ರಾಜಕಾಲುವೆಯಲ್ಲಿ ಕೊಚ್ಚಿಹೋಗಿ ಯುವಕನೊಬ್ಬ ಮೃತನಾಗಿದ್ದಾನೆ. ಇನ್ನು 22 ವರ್ಷದ ಯುವತಿ ಭಾನುರೇಖಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಚಾಲಕನ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೀಗ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರು ಮುಳುಗಡೆಯಾಗಿ ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣದ ಸಂಬಂಧ ಕಾರು ಚಾಲಕ ಹರೀಶ್ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತ ಯುವತಿ ಭಾನುರೇಖಾ ಸಹೋದರ ನೀಡಿದ ದೂರಿನ ಅನ್ವಯ ಕ್ಯಾಬ್ ಚಾಲಕ ಹರೀಶ್ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸೋಮವಾರ ಎಫ್ಐಆರ್ ದಾಖಲು ಮಾಡಲಾಗಿತ್ತು.