ಬೆಂಗಳೂರು, ಮೇ 26 (DaijiworldNews/SM): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹೊಸ ತಲೆನೋವಾಗಿದ್ದು, ಸಂಪುಟ ಸೇರೋದಕ್ಕೆ ಹಲವು ಶಾಸಕರು ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ಸಂಭವ್ಯ ಪಟ್ಟಿ ಸಿದ್ದಗೊಂಡಿದ್ದು, ಯಾರನ್ನು ಸೇರಿಸಬೇಕೆಂಬ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.
ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಮಾಡುತ್ತಾರೆ. ಹಲವು ಹೆಸರುಗಳನ್ನು ಅವರು ಮುಂದಿಟ್ಟಿದ್ದಾರೆ. ಎಲ್ಲವೂ ಕೂಡ ಸಿಎಂ ಸಿದ್ದರಾಮಯ್ಯ ವಿವೇಚನೆ ಅವರ ಪರಮಾಧಿಕಾರಕ್ಕೆ ಬಿಟ್ಟಿದ್ದು ಎಂದಿದ್ದಾರೆ. ನಾಳೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಆ ಮೂಲಕ ಇದೀಗ ಸಿದ್ದಪಡಿಸಲಾಗಿರುವ ಸಂಭವ್ಯ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನುವ ಸೂಚನೆಯನ್ನು ಪರೋಕ್ಷವಾಗಿ ನೀಡಲಾಗಿದೆ.